೧ ಅರಸುಗಳು 7:40

ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

38ಹತ್ತು ತಾಮ್ರದ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು ನಾಲ್ವತ್ತು ಕೊಳಗ ಹಿಡಿಯಿತು; ಒಂದೊಂದು ತೊಟ್ಟಿಯು ನಾಲ್ಕು ಮೊಳವು; ಆ ಹತ್ತು ಆಧಾರ ಗಳಲ್ಲಿಯೂ ಒಂದೊಂದರ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.

39ಮನೆಯ ಬಲ ಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಮನೆಯ ಎಡಪಾರ್ಶ್ವದಲ್ಲಿ ಐದು ಆಧಾರಗಳನ್ನೂ ಇಟ್ಟನು. ಆದರೆ ಸಮುದ್ರವನ್ನು ಮನೆಯ ಪೂರ್ವ ಭಾಗದ ಬಲಪಾರ್ಶ್ವದಲ್ಲಿ ದಕ್ಷಿಣಕ್ಕೆ ದುರಾಗಿ ಇಟ್ಟನು.

40ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.

41ಅವು ಯಾವವಂದರೆ, ಎರಡು ಸ್ತಂಭಗಳೂ ಎರಡು ಸ್ತಂಭಗಳ ತುದಿಯಲ್ಲಿರುವ ಕುಂಭಗಳ ಚಂಬು ಗಳೂ ಎರಡು ಸ್ತಂಭಗಳ ತಲೆಯಲ್ಲಿರುವ ಕುಂಭಗಳ ಎರಡು ಚಂಬುಗಳನ್ನು ಮುಚ್ಚುವ ಎರಡು ಜಾಲರಿ ಸಾಮಾನುಗಳೂ

42ಎರಡು ಜಾಲರಿಗಳಿಗೆ ನಾನೂರು ದಾಳಿಂಬಗಳೂ ಸ್ತಂಭಗಳ ಮೇಲೆ ಇರುವ ಎರಡು ಚಂಬುಗಳನ್ನು ಮುಚ್ಚುವಂತೆ ಒಂದು ಜಾಲರಿಗೆ ಎರಡು ಸಾಲಿನ ದಾಳಿಂಬಗಳೂ

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी