೧ ಕೊರಿಂಥದವರಿಗೆ 1:28

ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಕೊರಿಂಥದವರಿಗೆ 1

26ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.

27ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;

28ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.

29ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.

30ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.

೧ ಕೊರಿಂಥದವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी