ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--
21ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾ ಪಿಸಿದ್ದೇನಂದರೆ--ನಿಮ್ಮ ದೇವರಾದ ಕರ್ತನು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣು ಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳಿಗೆ ಕರ್ತನು ಹಾಗೆಯೇ ಮಾಡುವನು.
22ನೀವು ಅವುಗಳಿಗೆ ಭಯಪಡಬೇಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ತಾನೇ ನಿಮಗೋಸ್ಕರ ಯುದ್ಧಮಾಡುತ್ತಾನೆ ಎಂಬದು.
23ಆ ಕಾಲದಲ್ಲಿ ನಾನು ಕರ್ತನಿಗೆ ಮಾಡಿದ ಬಿನ್ನಹ ವೇನಂದರೆ--
24ನನ್ನ ದೇವರಾದ ಕರ್ತನೇ, ನೀನು ನಿನ್ನ ಸೇವಕನಿಗೆ ನಿನ್ನ ಮಹಿಮೆಯನ್ನೂ ನಿನ್ನ ಕೈಯ ಶಕ್ತಿಯನ್ನೂ ತೋರಿಸುವದಕ್ಕೆ ಆರಂಭಮಾಡಿದಿ; ನಿನ್ನ ಕೃತ್ಯಗಳ ಹಾಗೆಯೂ ನಿನ್ನ ಪರಾಕ್ರಮದ ಹಾಗೆಯೂ ಮಾಡಲು ಶಕ್ತನಾದ ದೇವರು ಪರಲೋಕದಲ್ಲಾಗಲಿ ಭೂಮಿಯಲ್ಲಾಗಲಿ ಯಾರಿದ್ದಾರೆ? ನಾನು ದಾಟಿ ಹೋಗಿ
25ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೇ ದೇಶವನ್ನೂ ಆ ಒಳ್ಳೇ ಬೆಟ್ಟವನ್ನೂ ಲೆಬನೋನನ್ನೂ ನೋಡುವದಕ್ಕೆ ಅಪ್ಪಣೆಯಾಗಬೇಕು ಎಂಬದೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ