ಇಬ್ರಿಯರಿಗೆ 3:4

ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 3

2ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ.

3ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ.

4ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ.

5ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು.

6ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.

ಇಬ್ರಿಯರಿಗೆ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी