ಯೆಹೆಜ್ಕೇಲನು 37:3

ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 37

1ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು.

2ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.

3ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು.

4ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ.

5ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ;

ಯೆಹೆಜ್ಕೇಲನು 37 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी