ಯೆರೆಮಿಯ 25:12

ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 25

10ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.

11ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು.

12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.

13ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು.

14ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी