ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
5ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
6ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
7ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
8ಅದಕ್ಕೆ ಆತನು--ನೀವು ಮೋಸ ಹೋಗ ದಂತೆ ಎಚ್ಚರಿಕೆ ತಂದುಕೊಳ್ಳಿರಿ; ಯಾಕಂದರೆ ಅನೇಕರು ನನ್ನ ಹೆಸರಿನಲ್ಲಿ ಬಂದು--ನಾನೇ ಕ್ರಿಸ್ತನು ಎಂದು ಹೇಳುವರು; ಸಮಯವು ಸವಿಾಪಿಸಿದೆ, ಆದಕಾರಣ ನೀವು ಅವರ ಹಿಂದೆ ಹೋಗಬೇಡಿರಿ.
9ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇವುಗಳು ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ