ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.
6ಇದಲ್ಲದೆ ಕರ್ತನು ಅವನ ಸಂಗಡ ಇನ್ನೂ ಮಾತನಾಡಿ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆಯಲು ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.
7ಆತನು ಅವನಿಗೆ--ನಿನ್ನ ಕೈಯನ್ನು ಉಡಿಯಲ್ಲಿ ಹಾಕು ಅಂದಾಗ ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಉಡಿಯಿಂದ ಹೊರಗೆ ತೆಗೆಯಲು ಇಗೋ, ಅದು ಅವನ ಬೇರೆ ದೇಹದಂತಾಗಿತ್ತು.
8ಅವರು ನಿನ್ನನ್ನು ನಂಬದೆ ಮೊದಲನೆಯ ಮಹ ತ್ಕಾರ್ಯವನ್ನು ತಿರಸ್ಕರಿಸಿದರೂ ಎರಡನೆಯದನ್ನು ಲಕ್ಷ್ಯವಿಟ್ಟು ನಂಬುವರು.
9ಆ ಎರಡೂ ಮಹತ್ಕಾರ್ಯ ಗಳನ್ನು ಅವರು ನಂಬದೆಯೂ ನಿನ್ನ ಮಾತನ್ನು ಕೇಳ ದೆಯೂ ಹೋದರೆ ನದಿಯ ನೀರನ್ನು ತೆಗೆದು ಒಣಗಿದ ನೆಲದಮೇಲೆ ಸುರಿಯಬೇಕು. ಆಗ ನೀನು ನದಿಯಿಂದ ತೆಗೆದ ನೀರು ಒಣಗಿದ ನೆಲದ ಮೇಲೆ ರಕ್ತವಾಗುವದು ಅಂದನು.
10ಮೋಶೆಯು ಕರ್ತನಿಗೆ--ಓ ನನ್ನ ಕರ್ತನೇ, ನಾನು ಮೊದಲಿನಿಂದಲೂ ನೀನು ನಿನ್ನ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿ ಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ