೧ ಸಮುವೇಲನು 14:40

ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 14

38ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.

39ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ.

40ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು.

41ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು.

42ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು.

೧ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी