ಪ್ರಲಾಪಗಳು 1:4

ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 1

2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.

3ಯೆಹೂದವು ಸಂಕಟದ ನಿಮಿತ್ತವೂ ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋಯಿತು; ಆಕೆಯು ಅನ್ಯಜನಾಂಗಗಳೊಳಗೆ ವಾಸಮಾಡುವವಳಾಗಿ ವಿಶ್ರಾಂತಿಯನ್ನು ಕಾಣಳು; ಅವಳನ್ನು ಹಿಂಸಿಸುವವ ರೆಲ್ಲರೂ ಅವಳನ್ನು ಇಕ್ಕಟ್ಟಿನ ಮಧ್ಯದಲ್ಲಿ ಸಿಕ್ಕಿಸಿರುತ್ತಾರೆ.

4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.

5ಆಕೆಯ ವೈರಿಗಳು ಪ್ರಮುಖರಾದರು, ಶತ್ರುಗಳು ಅಭಿವೃದ್ಧಿಯಾಗಿ ದ್ದಾರೆ; ಅನೇಕ ಅಪರಾಧಗಳ ನಿಮಿತ್ತ ಕರ್ತನು ಆಕೆಯನ್ನು ಸಂಕಟಪಡಿಸಿದ್ದಾನೆ. ಆಕೆಯ ಮಕ್ಕಳು ಶತ್ರು ವಿನ ಮುಂದೆ ಸೆರೆಗೆ ಹೋಗಿದ್ದಾರೆ.

6ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.

ಪ್ರಲಾಪಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी