ದಾನಿಯೇಲನು 11:3

ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 11

1ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.

2ನಾನು ಈಗ ನಿನಗೆ ಸತ್ಯವನ್ನು ತಿಳಿಸುತ್ತೇನೆ; ಇಗೋ, ಪಾರಸಿಯರಲ್ಲಿ ಇನ್ನು ಮೂರು ಅರಸರು ನಿಲ್ಲುವರು; ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು; ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್‌ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸು ವನು.

3ಆಗ, ಬಲವುಳ್ಳ ಒಬ್ಬ ಅರಸನು ಎದ್ದು ಮಹಾಅಧಿಕಾರದಿಂದ ಆಳಿ ತನ್ನ ಚಿತ್ತದ ಪ್ರಕಾರ ಮಾಡುವನು.

4ಅವನು ತಲೆ ಎತ್ತಿದ ಮೇಲೆ ಅವನ ರಾಜ್ಯವು ಮುರಿಯಲ್ಪಟ್ಟು ಆಕಾಶದ ನಾಲ್ಕು ದಿಕ್ಕುಗಳ ಕಡೆಗೆ ವಿಭಾಗಿಸಲ್ಪಡುವದು; ಅವನ ಸಂತತಿಗಾಗಿ ಅಲ್ಲ, ಅಥವಾ ಅವನು ಆಳಿದ ಅಧಿಕಾರದ ಹಾಗಲ್ಲ ಅವನ ರಾಜ್ಯವು ಕೀಳಲ್ಪಟ್ಟು ಅವರಿಗಲ್ಲ, ಮತ್ತೊಬ್ಬರಿಗೆ ಹಂಚಲ್ಪಡುವದು.

5ದಕ್ಷಿಣದ ಅರಸನು ಬಲಿಷ್ಠನಾಗಿ ರುವನು. ಆದರೆ ಅವನ ಪ್ರಧಾನರಲ್ಲಿ ಒಬ್ಬನು ಇವನಿ ಗಿಂತ ಬಲಿಷ್ಠನಾಗಿದ್ದು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವದು.

ದಾನಿಯೇಲನು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी