೧ ಸಮುವೇಲನು 19:9

ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 19

7ಆಗ ಯೋನಾತಾ ನನು ದಾವೀದನನ್ನು ಕರೆದು ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ ದಾವೀದನನ್ನು ಸೌಲನ ಬಳಿಗೆ ಕರ ತಂದನು; ಅವನು ಮುಂಚಿನ ಹಾಗೆಯೇ ಅವನ ಬಳಿಯಲ್ಲಿ ಇದ್ದನು.

8ಆದರೆ ತಿರಿಗಿ ಯುದ್ಧ ಉಂಟಾ ಯಿತು; ಆಗ ದಾವೀದನು ಹೋಗಿ ಫಿಲಿಷ್ಟಿಯರ ಸಂಗಡ ಯುದ್ಧ ಮಾಡಿ ಅವರನ್ನು ದೊಡ್ಡ ಸಂಹಾರ ದಿಂದ ಹೊಡೆದನು; ಅವರು ಅವನ ಎದುರಿನಿಂದ ಓಡಿಹೋದರು.

9ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯೊಳಗೆ ಕುಳಿತಿರುವಾಗ ಕರ್ತನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂತು; ದಾವೀದನು ತನ್ನ ಕೈಯಿಂದ (ಕಿನ್ನರಿ) ಬಾರಿಸುತ್ತಿದ್ದನು.

10ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಯತ್ನಿಸಿದನು; ಆದರೆ ಇವನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಈಟಿಯು ಗೋಡೆಯಲ್ಲಿ ಹತ್ತಿ ಕೊಳ್ಳುವಂತೆ ಅವನು ಹೊಡೆದನು. ದಾವೀದನು ಆ ರಾತ್ರಿಯಲ್ಲಿ ಓಡಿಹೋಗಿ ತಪ್ಪಿಸಿಕೊಂಡನು.

11ಆದರೆ ದಾವೀದನಿಗಾಗಿ ಕಾದುಕೊಂಡಿದ್ದು ಉದಯ ದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ವಿಾಕಲಳು ಅವನಿಗೆ--ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ ನಾಳೆ ಕೊಲ್ಲಲ್ಪಡುವಿ ಎಂದು ಹೇಳಿ

೧ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी