ಆದಿಕಾಂಡ 18:26

ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 18

24ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ?

25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.

26ಅದಕ್ಕೆ ಕರ್ತನು--ನನಗೆ ಸೊದೋಮ್‌ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ ಅವರಿಗೊಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು ಅಂದನು.

27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.

28ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಕಡಿಮೆ ಇದ್ದರೆ ಆ ಐದು ಮಂದಿ ಇಲ್ಲದ್ದರಿಂದ ಆ ಪಟ್ಟಣವನ್ನು ನಾಶಮಾಡುವಿಯೋ ಎಂದು ಪ್ರತ್ಯುತ್ತರವಾಗಿ ಅಂದನು. ಆದಕ್ಕೆ ಆತನು--ನಾಲ್ವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವದಿಲ್ಲ ಅಂದನು.

ಆದಿಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी