ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
1ಓ ಕರ್ತನೇ, ನನ್ನ ಮೇಲೆ ಬಂದ ದುರ್ಗತಿಯನ್ನು ಜ್ಞಾಪಕಮಾಡಿಕೋ ಪರಿಗಣಿಸು, ನಮ್ಮ ನಿಂದೆಯನ್ನು ನೋಡು.
2ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ ನಮ್ಮ ಮನೆಗಳು ಅನ್ಯರಿಗೂ ವಶ ವಾದವು.
3ನಾವು ಅನಾಥರು ತಂದೆ ಇಲ್ಲದವರು, ನಮ್ಮ ತಾಯಿಂದಿರು ವಿಧವೆಯರು.
4ನಾವು ನಮ್ಮ ನೀರನ್ನು ಹಣ ಕೊಟ್ಟು ಕುಡಿದಿದ್ದೇವೆ, ನಮ್ಮ ಸೌದೆಯು ನಮಗೆ ಮಾರಲ್ಪಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ