ಇಬ್ರಿಯರಿಗೆ 2:10

ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 2

8ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ.

9ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ

10ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--

12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ

ಇಬ್ರಿಯರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी