ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇ ನಂದರೆ,
18ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
19ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ವಿಸ್ಮಯಗೊಳ್ಳುವರು; ನೀನು ಸಂಪೂರ್ಣ ಭೀತಿಗೊಳ ಗಾಗಿ ಇನ್ನೆಂದಿಗೂ ಇಲ್ಲದಂತಾಗುವಿ.
20ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇ ನಂದರೆ,
21ಮನುಷ್ಯಪುತ್ರನೇ, ನೀನು ಚೀದೋನಿಗೆ ಅಭಿಮುಖನಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.
22ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿದೋನೇ ನಾನು ನಿನಗೆ ವಿರೋಧವಾಗಿದ್ದೇನೆ; ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧನಾಗುವಾಗ ನಾನೇ ಕರ್ತನೆಂದು ತಿಳಿಯುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ