೧ ಅರಸುಗಳು 1:32

ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 1

30ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾ ಯೇಲಿನ ದೇವರಾದ ಕರ್ತನ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿ ನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದ ಮೇಲೆ ಆಣೆ ಇಡುತ್ತೇನೆಂದೂ ಪ್ರಮಾಣ ವಾಗಿ ಹೇಳುತ್ತೇನೆ.

31ಆಗ ಬತ್ಷೆಬೆಳು ಮುಖವನ್ನು ನೆಲಕ್ಕೆ ಬೊಗ್ಗಿಸಿ ಅರಸನನ್ನು ವಂದಿಸಿ--ನನ್ನ ಒಡೆ ಯನೂ ಅರಸನೂ ಆದ ದಾವೀದನು ಎಂದೆಂದಿಗೂ ಬಾಳಲಿ ಅಂದಳು.

32ಆಗ ಅರಸನಾದ ದಾವೀದನು--ಯಾಜಕನಾದ ಚಾದೋಕನನ್ನೂ ಪ್ರವಾದಿಯಾದ ನಾತಾನನನ್ನೂ ಯೆಹೋಯಾದಾವನ ಮಗನಾದ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ ಅಂದನು.

33ಅವರು ಅರಸನ ಸಮ್ಮುಖಕ್ಕೆ ಬಂದಾಗ ಅರಸನು ಅವರಿಗೆ--ನೀವು ನಿಮ್ಮ ಯಜಮಾನನ ಸೇವಕರನ್ನು ಕರಕೊಂಡುಹೋಗಿ ನನ್ನ ಮಗನಾದ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವ ನನ್ನು ಕರಕೊಂಡು ಹೋಗಿರಿ.

34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.

೧ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी