ಯೆಹೋಶುವ 24:3

ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್‌ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;

ಸಂದರ್ಭದೊಂದಿಗೆ ಓದಿ · ಯೆಹೋಶುವ 24

1ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥ ರನ್ನೂ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ಕರೆಸಿದನು. ಅವರು ದೇವರ ಮುಂದೆ ಬಂದು ನಿಂತರು.

2ಯೆಹೋಶುವನು ಎಲ್ಲಾ ಜನರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--ಪೂರ್ವ ದಲ್ಲಿ ನಿಮ್ಮ ತಂದೆಗಳು, ಅಬ್ರಹಾಮನೂ ನಾಹೋ ರನೂ ಅವರ ತಂದೆಯಾದ ತೆರಹನೂ ನದಿಯ ಆಚೆ ವಾಸವಾಗಿದ್ದು ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.

3ಆದರೆ ನಾನು ನದಿಯ ಆಚೆಯಲ್ಲಿದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ತಕ್ಕೊಂಡು ಬಂದು ಅವನನ್ನು ಕಾನಾನ್‌ ದೇಶವನ್ನೆಲ್ಲಾ ಸಂಚಾರ ಮಾಡಿಸಿ ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು;

4ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್‌ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.

5ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಐಗುಪ್ತವನ್ನು ಬಾಧಿಸಿದ ತರುವಾಯ ನಿಮ್ಮನ್ನು ಹೊರಗೆ ತಂದೆನು.

ಯೆಹೋಶುವ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी