೧ ಸಮುವೇಲನು 18:22

ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 18

20ಇದಲ್ಲದೆ ಸೌಲನ ಮಗಳಾದ ವಿಾಕಲಳು ದಾವೀದನನ್ನು ಪ್ರೀತಿಮಾಡಿದಳು. ಅದು ಸೌಲನಿಗೆ ತಿಳಿಸಲ್ಪಟ್ಟಾಗ ಆ ಕಾರ್ಯ ಅವನಿಗೆ ಯುಕ್ತವಾಗಿ ತೋರಿತು.

21ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.

22ಸೌಲನು ತನ್ನ ಸೇವಕರಿಗೆ--ನೀವು ದಾವೀದನ ಸಂಗಡ ಗುಪ್ತವಾಗಿ ಮಾತನಾಡಿ--ಇಗೋ, ಅರಸನು ನಿನ್ನಲ್ಲಿ ಸಂತೋಷಪಡುತ್ತಾನೆ, ತನ್ನ ಸೇವಕರೆಲ್ಲರೂ ನಿನ್ನನ್ನು ಪ್ರೀತಿಸುತ್ತಾರೆ; ಆದದರಿಂದ ಅರಸನ ಅಳಿಯ ನಾಗು ಎಂದು ಹೇಳಿರಿ ಎಂದು ಆಜ್ಞಾಪಿಸಿದನು.

23ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.

24ಆಗ ಸೌಲನ ಸೇವಕರು ಅವನಿಗೆ--ದಾವೀದನು ಈ ಪ್ರಕಾರವಾಗಿ ಮಾತನಾಡಿ ದನೆಂದು ಹೇಳಿದರು.

೧ ಸಮುವೇಲನು 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी