ದಾನಿಯೇಲನು 9:23

ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.

22ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.

23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.

24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

25ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी