ಆಮೋಸ 4:10

ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಆಮೋಸ 4

8ಆದ್ದರಿಂದ ನೀರು ಕುಡಿಯುವದಕ್ಕಾಗಿ ಒಂದು ಪಟ್ಟಣದವರು ಮತ್ತೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ ಅವರಿಗೆ ತೃಪ್ತಿಯಾಗಲಿಲ್ಲ, ಆದರೂ ನೀವು ನನ್ನ ಕಡೆಗೆ ಹಿಂತಿರುಗಿಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

9ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

10ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮ್ಮೊಳಗೆ ಕಳುಹಿಸಿದ್ದೇನೆ.ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ ನಿಮ್ಮ ಯೌವನಸ್ಥರನ್ನು ಕತ್ತಿಯಿಂದ ಕೊಂದುಹಾಕಿದ್ದೇನೆ. ನಿಮ್ಮ ದಂಡುಗಳ ದುರ್ವಾಸ ನೆಯು ನಿಮ್ಮ ಮೂಗುಗಳಲ್ಲಿ ಸೇರುವ ಹಾಗೆ ಮಾಡಿ ದ್ದೇನೆ. ಆದಾಗ್ಯೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.

12ಆದದ ರಿಂದ ಓ ಇಸ್ರಾಯೇಲೇ, ನಿನಗೆ ನಾನು ಹೀಗೆ ಮಾಡುತ್ತೇನೆ; ನಾನು ನಿನಗೆ ಇದನ್ನು ಮಾಡುವದರಿಂದ ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧ ಮಾಡಿಕೊ.

ಆಮೋಸ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी