ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
34ಅಲ್ಲಿ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಅವ ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿ ಷೇಕಿಸಲಿ. ತುತೂರಿಯನ್ನು ಊದಿ--ಅರಸನಾದ ಸೊಲೊಮೋನನನ್ನು ದೇವರು ರಕ್ಷಿಸಲಿ ಅನ್ನಿರಿ.
35ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕೂತು ಕೊಳ್ಳುವ ಹಾಗೆ ನೀವು ಅವನ ಹಿಂದೆ ಬನ್ನಿರಿ; ಅವನು ನನಗೆ ಬದಲಾಗಿ ಅರಸನಾಗಿರುವನು; ಇಸ್ರಾಯೇಲಿನ ಮೇಲೆಯೂ ಯೆಹೂದದ ಮೇಲೆಯೂ ನಾಯಕ ನಾಗಿರಲು ನಾನು ಅವನನ್ನು ನೇಮಿಸಿದ್ದೇನೆ ಅಂದನು.
36ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ ಪ್ರತ್ಯುತ್ತರವಾಗಿ--ಆಮೆನ್: ಅರಸನಾದ ನನ್ನ ಒಡೆಯನ ದೇವರಾದ ಕರ್ತನು ಹಾಗೆಯೇ ಹೇಳಲಿ.
37ಕರ್ತನು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದನೋ ಹಾಗೆಯೇ ಸೊಲೊ ಮೋನನ ಸಂಗಡ ಇದ್ದು ನನ್ನ ಒಡೆಯನೂ ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನ ವನ್ನು ಅಧಿಕವಾಗಮಾಡಲಿ ಅಂದನು.
38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ