ಯೆಶಾಯ 49:22

ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.

ಸಂದರ್ಭದೊಂದಿಗೆ ಓದಿ · ಯೆಶಾಯ 49

20ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು; ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು.

21ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.

22ಕರ್ತನಾದ ದೇವರು ಇಂತೆನ್ನುತ್ತಾನೆ--ಇಗೋ, ನಾನು ಅನ್ಯಜನಗಳ ಕಡೆಗೆ ಕೈ ಎತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಕೈಹಿಡಿದು ತರುವರು; ನಿನ್ನ ಕುಮಾರ್ತೆಯರನ್ನು ತಮ್ಮ ಹೆಗಲಮೇಲೆ ತರುವರು.

23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.

24ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.

ಯೆಶಾಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी