ಧರ್ಮೋಪದೇಶಕಾಂಡ 21:9

ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 21

7ಉತ್ತರಕೊಟ್ಟು ಹೇಳತಕ್ಕದ್ದೇನಂದರೆ--ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ; ನಮ್ಮ ಕಣ್ಣುಗಳು ಅದನ್ನು ನೋಡಲಿಲ್ಲ.

8ಓ ಕರ್ತನೇ, ನೀನು ವಿಮೋಚಿಸಿದ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಕರುಣೆಯುಳ್ಳವನಾಗಿರು. ನಿನ್ನ ಜನ ರಾದ ಇಸ್ರಾಯೇಲ್ಯರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡ ಎಂಬದೇ. ಆ ರಕ್ತಾಪರಾಧವು ಅವರಿಗೆ ಕ್ಷಮಿಸಲ್ಪಡುವದು.

9ಈ ಪ್ರಕಾರ ನೀನು ಕರ್ತನ ಮುಂದೆ ಸರಿಯಾದದ್ದನ್ನು ಮಾಡಿದರೆ ರಕ್ತಾಪರಾಧವನ್ನು ನಿನ್ನಿಂದ ತೆಗೆದುಹಾಕುವಿ.

10ನೀನು ನಿನ್ನ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡಲು ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಕೈಗೆ ಒಪ್ಪಿಸುವದರಿಂದ ನೀನು ಅವರನ್ನು ಸೆರೆ ಹಿಡಿದಾಗ

11ಆ ಸೆರೆಯವರಲ್ಲಿ ಸೌಂದರ್ಯವಾದ ಸ್ತ್ರೀಯನ್ನು ನೋಡಿ ಅವಳನ್ನು ನಿನಗೆ ಹೆಂಡತಿಯಾಗಿ ತಕ್ಕೊಳ್ಳುವಹಾಗೆ ಅವಳ ಮೇಲೆ ಅಪೇಕ್ಷೆಯನ್ನಿಟ್ಟರೆ

ಧರ್ಮೋಪದೇಶಕಾಂಡ 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी