ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
11ನಿನ್ನ ರಾಜ್ಯದ ಘನವನ್ನು ಹೇಳುವರು; ನಿನ್ನ ಪರಾಕ್ರಮವನ್ನು ನುಡಿಯುವರು.
12ಮನುಷ್ಯನ ಮಕ್ಕಳಿಗೆ ಆತನ ಪರಾಕ್ರಮ ಕ್ರಿಯೆಗಳನ್ನೂ ಆತನ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.
13ನಿನ್ನ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿನ್ನ ದೊರೆತನವು ಎಲ್ಲಾ ತಲತಲಾಂತರಗಳಲ್ಲಿ ಇರುವದು.
14ಕರ್ತನು ಬೀಳುವವರೆಲ್ಲರನ್ನು ಉದ್ಧಾರಮಾಡುತ್ತಾನೆ; ತಗ್ಗಿಸಿ ಕೊಳ್ಳುವವರೆಲ್ಲರನ್ನು ಎತ್ತುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ