೧ ಯೋಹಾನನು 2:4

ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 2

2ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತವಾಗಿದ್ದಾನೆ; ನಮ್ಮ ಪಾಪಗಳಿಗೆ ಮಾತ್ರ ವಲ್ಲದೆ ಸಮಸ್ತ ಲೋಕದ ಪಾಪಗಳಿಗಾಗಿಯೂ ಪ್ರಾಯಶ್ಚಿತ್ತವಾಗಿದ್ದಾನೆ.

3ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.

4ಒಬ್ಬನು--ನಾನು ಆತನನ್ನು ಬಲ್ಲೆನೆಂದು ಹೇಳಿ ಆತನ ಆಜ್ಞೆಗಳನ್ನು ಕೈಕೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ; ಸತ್ಯವು ಅವನಲ್ಲಿ ಇಲ್ಲ.

5ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.

6ಆತನಲ್ಲಿ ನೆಲೆ ಗೊಂಡವನಾಗಿದ್ದೇನೆಂದು ಹೇಳುವವನು ಆತನು ನಡೆ ದಂತೆಯೇ ತಾನೂ ನಡೆಯುವದಕ್ಕೆ ಬದ್ಧನಾಗಿದ್ದಾನೆ.

೧ ಯೋಹಾನನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी