ಯೆರೆಮಿಯ 48:26

ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 48

24ಕೆರೀಯೋತ್‌ನ ಮೇಲೆಯೂ ಬೊಚ್ರದ ಮೇಲೆಯೂ ಸವಿಾಪದಲ್ಲಾಗಲಿ ದೂರ ದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.

25ಮೋವಾಬಿನ ಕೊಂಬು ಕಡಿದು ಹಾಕಲ್ಪಟ್ಟಿದೆ; ಅದರ ತೋಳು ಮುರಿಯಲ್ಪಟ್ಟಿದೆ ಎಂದು ಕರ್ತನು ಅನ್ನುತ್ತಾನೆ.

26ಅದನ್ನು ನೀವು ಅಮಲೇರಿಸಿರಿ; ಕರ್ತನಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ಕಾರಿದ್ದ ರಲ್ಲಿ ಹೊರಳಾಡುವದು; ಅದೇ ಹಾಸ್ಯಕ್ಕಾಗಿರುವದು.

27ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ನೀನು ಅವರ ವಿಷಯ ಯಾವಾಗ ಮಾತನಾಡಿದಂದಿನಿಂದ ಸಂತೋಷಕ್ಕಾಗಿ ತಲೆ ಅಲ್ಲಾಡಿಸಿದಿಯಲ್ಲಾ.

28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.

ಯೆರೆಮಿಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी