ಯೆಹೆಜ್ಕೇಲನು 44:9

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 44

7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;

8ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.

9ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಹೃದಯದಲ್ಲಿಯೂ ಶರೀರದ ಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲಿನ ಮಕ್ಕಳೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧಸ್ಥಳದೊಳಗೆ ಪ್ರವೇಶಿಸ ಬಾರದು.

10ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು.

11ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.

ಯೆಹೆಜ್ಕೇಲನು 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी