ಲೂಕನು 19:45

ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ

ಸಂದರ್ಭದೊಂದಿಗೆ ಓದಿ · ಲೂಕನು 19

43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.

44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.

45ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ

46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.

47ಇದಲ್ಲದೆ ಆತನು ಪ್ರತಿದಿನವೂ ದೇವಾಲಯ ದಲ್ಲಿ ಬೋಧಿಸುತ್ತಿದ್ದನು. ಆದರೆ ಪ್ರಧಾನಯಾಜಕರೂ ಶಾಸ್ತ್ರಿಗಳೂ ಜನರ ಪ್ರಮುಖರೂ ಆತನನ್ನು ಕೊಲ್ಲು ವದಕ್ಕೆ ಹವಣಿಸುತ್ತಿದ್ದರು.

ಲೂಕನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी