೨ ಪೂರ್ವಕಾಲವೃತ್ತಾಂತ 17:2

ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 17

1ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;

2ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿ ಕೊಂಡನು. ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು ಯೆಹೂ ದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದು ಕೊಂಡ ಎಫ್ರಾಯಾಮಿನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.

3ಯೆಹೋಷಾಫಾಟನು ಬಾಳೀಮ್‌ ನನ್ನು ಹುಡುಕದೆ ತನ್ನ ತಂದೆಯಾದ ದಾವೀದನ ಮೊದಲಿನ ಮಾರ್ಗಗಳಲ್ಲಿ ನಡೆದದ್ದರಿಂದ ಕರ್ತನು ಅವನ ಸಂಗಡ ಇದ್ದನು.

4ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.

೨ ಪೂರ್ವಕಾಲವೃತ್ತಾಂತ 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी