ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
17ದೇವರ ಆಲಯದ ಪ್ರತಿಷ್ಠೆ ಗೋಸ್ಕರ ನೂರು ಹೋರಿಗಳನ್ನೂ ಇನ್ನೂರು ಟಗರು ಗಳನ್ನೂ ನಾನೂರು ಕುರಿಮರಿಗಳನ್ನೂ ಇಸ್ರಾಯೇಲ್ ಕುಲಗೋತ್ರಗಳ ಲೆಕ್ಕದ ಪ್ರಕಾರ ಸಮಸ್ತ ಇಸ್ರಾ ಯೇಲ್ಯರ ಪಾಪವನ್ನು ಕಳೆಯುವದಕ್ಕೋಸ್ಕರ ಹನ್ನೆರಡು ಮೇಕೆಯ ಹೋತಗಳನ್ನೂ ಬಲಿ ಅರ್ಪಿಸಿದರು.
18ಮೋಶೆಯ ಪುಸ್ತಕದಲ್ಲಿ ಬರೆಯಲ್ಪಟ್ಟ ಹಾಗೆ ಯೆರೂ ಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆ ಗೋಸ್ಕರ ಯಾಜಕರನ್ನು ಅವರ ಸರತಿಯ ಪ್ರಕಾರವೂ ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.
19ಇದಲ್ಲದೆ ಸೆರೆಯ ಮಕ್ಕಳು ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.
20ಯಾಜಕರೂ ಲೇವಿಯರ ಕೂಡ ಶುದ್ಧಮಾಡಿ ಕೊಂಡಿದ್ದರು; ಅವರೆಲ್ಲರು ಶುಚಿಯಾಗಿದ್ದು ಸೆರೆಯ ಸಮಸ್ತ ಮಕ್ಕಳಿಗೋಸ್ಕರವೂ ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ ತಮಗೋಸ್ಕರವೂ ಪಸ್ಕ ವನ್ನು ವಧಿಸಿದರು.
21ಹಾಗೆಯೇ ಸೆರೆಯಿಂದ ತಿರಿಗಿ ಬಂದ ಇಸ್ರಾಯೇಲ್ ಮಕ್ಕಳು ಇಸ್ರಾಯೇಲ್ ದೇವ ರಾಗಿರುವ ಕರ್ತನನ್ನು ಹುಡುಕಲು ದೇಶದ ಜನಾಂಗ ಗಳ ಅಶುಚಿಯಿಂದ ತಮ್ಮನ್ನು ಪ್ರತ್ಯೇಕಿಸಿ ಕೊಂಡು ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ