ಯೆಶಾಯ 14:8

ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.

ಸಂದರ್ಭದೊಂದಿಗೆ ಓದಿ · ಯೆಶಾಯ 14

6ಆಳುತ್ತಿದ್ದ ದುಷ್ಟರ ಕೋಲನ್ನೂ ರಾಜರ ದಂಡವನ್ನೂ ಕರ್ತನು ಮುರಿದುಬಿಟ್ಟಿದ್ದಾನೆ. ಯಾವನೂ ಅಡ್ಡಿ ಮಾಡನು.

7ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿ ಗೊಂಡಿದೆ. ಅವರು ಉತ್ಸಾಹಧ್ವನಿಯನ್ನು ಎತ್ತುತ್ತಾರೆ.

8ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.

9ನಿನಗೋ ಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವ ರನ್ನೂ ಅಂದರೆ, ಭೂಲೋಕದ ಮುಖಂಡರಾಗಿದ್ದವರೆ ಲ್ಲರನ್ನೂ ಕಲಕಿ (ಎಚ್ಚರಿಸಿ) ಜನಾಂಗಗಳ ಎಲ್ಲಾ ರಾಜ ರುಗಳನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.

10ಅವರೆಲ್ಲರು ನಿನಗೆ--ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ, ನೀನು ನಮ್ಮ ಸಮಾನನಾಗಿದ್ದೀ ಎಂದು ಮಾತಾಡಿ ಹೇಳುವರು.

ಯೆಶಾಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी