೧ ಅರಸುಗಳು 7:10

ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 7

8ತಾನು ವಾಸವಾಗಿರುವ ತನ್ನ ಮನೆಯಲ್ಲಿ ದ್ವಾರಾಂಗ ಳದ ಒಳಭಾಗದಲ್ಲಿ ಈ ಕೆಲಸದ ಹಾಗೆ ಮಾಡಲ್ಪಟ್ಟ ಬೇರೆ ಒಂದು ಅಂಗಳ ಇತ್ತು. ಇದಲ್ಲದೆ ಸೊಲೊ ಮೋನನು ತಾನು ತಕ್ಕೊಂಡ ಫರೋಹನ ಮಗಳಿಗೂ ಈ ದ್ವಾರಾಂಗಳದ ಹಾಗೆ ಒಂದು ಮನೆಯನ್ನು ಮಾಡಿ ದನು.

9ಇವೆಲ್ಲಾ ಒಳಗೂ ಹೊರಗೂ ಅಸ್ತಿವಾರ ಗಳು ಮೊದಲುಗೊಂಡು ಕಬೋದದ ವರೆಗೂ ಹೊರ ಗಿರುವ ದೊಡ್ಡ ಅಂಗಳದ ಮಟ್ಟಿಗೂ ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲ್ಪಟ್ಟ ಕೆತ್ತಿದ ಬೆಲೆಯುಳ್ಳ ಕಲ್ಲು ಗಳಾಗಿದ್ದವು.

10ಅಸ್ತಿವಾರವು ಹತ್ತು ಮೊಳದ ಕಲ್ಲು ಗಳೂ ಎಂಟು ಮೊಳದ ಕಲ್ಲುಗಳೂ ಆದ ಬೆಲೆ ಯುಳ್ಳ ಕಲ್ಲುಗಳಾಗಿಯೂ ದೊಡ್ಡ ಕಲ್ಲುಗಳಾಗಿಯೂ ಇದ್ದವು.

11ಅದರ ಮೇಲೆ ಕೆತ್ತಿದ ಕಲ್ಲುಗಳ ಅಳ ತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ ದೇವದಾರುಗಳೂ ಇದ್ದವು.

12ದೊಡ್ಡ ಅಂಗಳವು ಸುತ್ತಲಾಗಿ ಮೂರು ತರ ಕೆತ್ತಿದ ಕಲ್ಲುಗಳೂ ಒಂದು ತರ ದೇವ ದಾರು ಮರದ ತೊಲೆಗಳೂ ಆಗಿದ್ದವು; ಕರ್ತನ ಮನೆಯ ಒಳ ಅಂಗಳಕ್ಕೂ ಮನೆಯ ದ್ವಾರಾಂಗಳಕ್ಕೂ ಹಾಗೆಯೇ ಇತ್ತು.

೧ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी