ಮಾರ್ಕನು 2:11

ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 2

9ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?

10ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--

11ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.

12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.

13ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.

ಮಾರ್ಕನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी