ಲೂಕನು 5:11

ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಸಂದರ್ಭದೊಂದಿಗೆ ಓದಿ · ಲೂಕನು 5

9ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.

10ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯ ಪಟ್ಟರು. ಆಗ ಯೇಸು ಸೀಮೋನನಿಗೆ--ಹೆದರಬೇಡ. ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವಿ ಅಂದನು.

11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದಾಗ ಎಲ್ಲವನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

12ತರುವಾಯ ಆತನು ಒಂದಾನೊಂದು ಪಟ್ಟಣ ದಲ್ಲಿದ್ದಾಗ ಇಗೋ, ತುಂಬಾ ಕುಷ್ಠವಿದ್ದ ಒಬ್ಬ ಮನುಷ್ಯನು ಯೇಸುವನ್ನು ನೋಡಿ ಬೋರಲ ಬಿದ್ದು ಆತನಿಗೆ--ಕರ್ತನೇ, ನಿನಗೆ ಮನಸ್ಸಿದ್ದರೆ ನೀನು ನನ್ನನ್ನು ಶುದ್ಧ ಮಾಡಬಲ್ಲೆ ಎಂದು ಆತನನ್ನು ಬೇಡಿಕೊಂಡನು.

13ಆತನು ತನ್ನ ಕೈಚಾಚಿ ಅವನನ್ನು ಮುಟ್ಟಿ ಅವ ನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು. ಕೂಡಲೆ ಆ ಕುಷ್ಠವು ಅವನಿಂದ ಹೊರಟುಹೋಯಿತು.

ಲೂಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी