ಯೆಶಾಯ 43:8

ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

ಸಂದರ್ಭದೊಂದಿಗೆ ಓದಿ · ಯೆಶಾಯ 43

6ನಾನು--ಒಪ್ಪಿಸಿಬಿಡು ಎಂದು ಉತ್ತರಕ್ಕೆ ತಡೆಯಬೇಡ ಎಂದು ದಕ್ಷಿಣಕ್ಕೆ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನು ಭೂಮಿಯ ಅಂತ್ಯದಿಂದ ನನ್ನ ಕುಮಾರ್ತೆಯರನ್ನು

7ನನ್ನ ಹೆಸರಿ ನಿಂದ ಕರೆಯಲ್ಪಟ್ಟ ಪ್ರತಿಯೊಬ್ಬನನ್ನೂ ಬರಮಾಡು ವೆನು; ಅವನನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ, ನಾನು ಅವನನ್ನು ನಿರ್ಮಿಸಿದ್ದೇನೆ: ಹೌದು, ನಾನು ಅವನನ್ನು ಉಂಟುಮಾಡಿದ್ದೇನೆ.

8ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

9ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.

10ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.

ಯೆಶಾಯ 43 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी