ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
14ಆಮೇಲೆ ಆತನು ಜನರನ್ನೆಲ್ಲಾ ತನ್ನ ಬಳಿಗೆ ಕರೆದು ಅವರಿಗೆ--ನಿಮ್ಮಲ್ಲಿ ಪ್ರತಿಯೊಬ್ಬನು ನಾನು ಹೇಳುವದನ್ನು ಕೇಳಿ ಗ್ರಹಿಸಿರಿ;
15ಹೊರಗಿನಿಂದ ಮನುಷ್ಯನೊಳಗೆ ಸೇರಿ ಅವನನ್ನು ಹೊಲೆಮಾಡು ವಂಥದ್ದು ಯಾವದೂ ಇಲ್ಲ. ಆದರೆ ಅವನೊಳಗಿಂದ ಹೊರಗೆ ಬರುವಂಥವುಗಳೇ ಮನುಷ್ಯನನ್ನು ಹೊಲೆ ಮಾಡುವವುಗಳಾಗಿವೆ.
16ಯಾವನಿಗಾದರೂ ಕೇಳು ವದಕ್ಕೆ ಕಿವಿಗಳಿದ್ದರೆ ಅವನು ಕೇಳಲಿ ಅಂದನು.
17ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
18ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ