ಅರಣ್ಯಕಾಂಡ 22:9

ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 22

7ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಕಣಿ ಕೇಳುವದಕ್ಕಾಗಿ ತಮ್ಮ ಕೈಯಲ್ಲಿ ಕಾಣಿಕೆ ಗಳನ್ನು ತಕ್ಕೊಂಡು ಹೋದರು; ಅವರು ಬಿಳಾಮನ ಬಳಿಗೆ ಬಂದು ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.

8ಅವನು ಅವರಿಗೆ ಹೇಳಿದ್ದು--ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ; ಆಗ ಕರ್ತನು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು; ಆದ ಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳುಕೊಂಡರು.

9ದೇವರು ಬಿಳಾಮನ ಬಳಿಗೆ ಬಂದು--ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು ಅಂದನು.

10ಬಿಳಾ ಮನು ದೇವರಿಗೆ ಹೇಳಿದ್ದೇನಂದರೆ--ಚಿಪ್ಪೋರನ ಮಗನೂ ಮೋವಾಬಿನ ಅರಸನೂ ಬಾಲಾಕನು ನನ್ನ ಬಳಿಗೆ ಹೇಳಿಕಳುಹಿಸಿದ್ದೇನಂದರೆ--

11ಇಗೋ, ಐಗುಪ್ತ ದೇಶದಿಂದ ಹೊರಟಿರುವ ಒಂದು ಜನಾಂಗವು ಭೂಮುಖವನ್ನು ಆವರಿಸಿಕೊಂಡಿದೆ; ಈಗ ನೀನು ಬಂದು ನನಗೋಸ್ಕರ ಅದನ್ನು ಶಪಿಸು; ಒಂದು ವೇಳೆ ಅದರ ಸಂಗಡ ಯುದ್ಧಮಾಡಿ ಅದನ್ನು ಹೊರಗೆ ಹಾಕುವದಕ್ಕೆ ನಾನು ಸಮರ್ಥನಾದೇನು ಎಂಬದು.

ಅರಣ್ಯಕಾಂಡ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी