ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
3ಆದದರಿಂದ ನೀನು ಅವರಿಗೆ ಹೇಳತಕ್ಕದ್ದೇ ನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕಡೆಗೆ ತಿರುಗಿ ಕೊಳ್ಳಿರಿ, ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
4ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
6ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯ ಗಳೂ ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿ ಲ್ಲವೋ? ಆಗ ಅವರು ತಿರುಗಿಕೊಂಡು--ಸೈನ್ಯಗಳ ಕರ್ತನು ಯೋಚಿಸಿದ ಹಾಗೆಯೇ ನಮ್ಮ ಮಾರ್ಗಗಳ ಪ್ರಕಾರವಾಗಿಯೂ ನಮ್ಮ ಕ್ರಿಯೆಗಳ ಪ್ರಕಾರವಾ ಗಿಯೂ ನಮಗೆ ಮಾಡಿದ್ದಾನೆಂದು ಹೇಳಿದರು ಎಂಬದು.
7ದಾರ್ಯಾವೆಷನ ಎರಡನೆಯ ವರುಷದ ಹನ್ನೊಂ ದನೆ ತಿಂಗಳಾದ ಶೆಬಾಟ್ ಎಂಬ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ವಾಕ್ಯವು ಇದ್ದೋನಿನ ಮಗನಾದ ಬೆರೆಕ್ಯನ ಮಗನಾದ ಪ್ರವಾದಿಯಾದ ಜೆಕರ್ಯನಿಗೆ ಉಂಟಾಯಿತು. ಹೇಗೆಂದರೆ,
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ