ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
5ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
6ಆಗ ಯೆರೆವಿಾಯನು ಹೇಳಿದ್ದೇನೆಂದರೆ--ಕರ್ತನ ವಾಕ್ಯವು ನನಗೆ ಬಂತು, ಹೇಗಂದರೆ--
7ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು--ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು ಎಂದು ಹೇಳುವನು.
8ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು ಕರ್ತನ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆಬಂದು--ಬೆನ್ಯಾವಿಾನನ ದೇಶದ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ, ಬಾಧ್ಯದ ಅಧಿಕಾರವೂ ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ ಎಂದು ಬೇಡಿಕೊಂಡು ಹೇಳಿದನು. ಆಗ ಅದು ಕರ್ತನ ವಾಕ್ಯವೆಂದು ನಾನು ತಿಳುಕೊಂಡೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ