ಯೋಹಾನನು 19:16

ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.

ಸಂದರ್ಭದೊಂದಿಗೆ ಓದಿ · ಯೋಹಾನನು 19

14ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.

15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.

16ಆಗ ಅವನು ಯೇಸುವನ್ನು ಶಿಲುಬೆಗೆ ಹಾಕಿಸುವದಕ್ಕೆ ಅವರಿಗೆ ಒಪ್ಪಿಸಲಾಗಿ ಅವರು ಆತನನ್ನು ಸಾಗಿಸಿಕೊಂಡು ಹೋದರು.

17ಆತನು ತನ್ನ ಶಿಲುಬೆಯನ್ನು ಹೊತ್ತುಕೊಂಡು ಕಪಾಲವೆಂದು ಕರೆಯಲ್ಪಟ್ಟ ಸ್ಥಳಕ್ಕೆ ಹೋದನು. ಅದು ಇಬ್ರಿಯ ಭಾಷೆಯಲ್ಲಿ ಗೊಲ್ಗೊಥಾ (ಬುರುಡೆಗಳ ಸ್ಥಳ) ಎಂದು ಕರೆಯಲ್ಪಡುತ್ತದೆ.

18ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.

ಯೋಹಾನನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी