ಯೆಹೆಜ್ಕೇಲನು 34:24

ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 34

22ಆದದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ; ಅವು ಎಂದೆಂದೂ ಕೊಳ್ಳೆಯಾಗು ವದಿಲ್ಲ; ನಾನು ದನಗಳ ಮತ್ತು ಪಶುಗಳ ಮಧ್ಯೆ ನ್ಯಾಯತೀರಿಸುವೆನು.

23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.

24ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;

25ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.

26ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿ ಸುವೆನು, ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯಾಗುವದು;

ಯೆಹೆಜ್ಕೇಲನು 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी