ಇಬ್ರಿಯರಿಗೆ 1:8

ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 1

6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.

7ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.

8ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ.

9ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ

10ಕರ್ತನೇ, ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ, ಆಕಾಶಗಳು ನಿನ್ನ ಕೈಕೆಲಸಗಳಾಗಿವೆ.

ಇಬ್ರಿಯರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी