ಯೆರೆಮಿಯ 5:3

ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 5

1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.

2ಅವರು--ಕರ್ತನು ಜೀವಿಸುತ್ತಾನೆಂದು ಹೇಳಿದರೂ ನಿಶ್ಚಯವಾಗಿ ಸುಳ್ಳಾಗಿಯೇ ಅವರು ಆಣೆ ಇಡುತ್ತಾರೆ.

3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.

4ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು.

5ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.

ಯೆರೆಮಿಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी