ಅರಣ್ಯಕಾಂಡ 6:3

ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 6

1ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ --

2ನೀನು ಇಸ್ರಾ ಯೇಲ್‌ ಮಕ್ಕಳ ಸಂಗಡ ಮಾತನಾಡಿ ಹೇಳಬೇಕಾದ ದ್ದೇನಂದರೆ--ಪುರುಷನಾದರೂ ಸ್ತ್ರೀಯಾದರೂ ಕರ್ತ ನಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರನ ವಿಶೇಷ ವಾದ ಪ್ರಮಾಣವನ್ನು ಮಾಡಿ

3ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.

4ತನ್ನ ನಾಜೀರತನ ದಿವಸಗಳಲ್ಲೆಲ್ಲಾ ದ್ರಾಕ್ಷೇ ಬೀಜ ಮೊದಲುಗೊಂಡು ಸಿಪ್ಪೆಯ ವರೆಗೂ ದ್ರಾಕ್ಷೇ ಬಳ್ಳಿಯಲ್ಲಿ ಬೆಳೆದದ್ದು ಯಾವದನ್ನಾದರೂ ತಿನ್ನಬಾರದು.

5ಅವನ ನಾಜೀರತನ ಪ್ರಮಾಣದ ದಿವಸಗಳೆಲ್ಲಾ ಕ್ಷೌರ ಕತ್ತಿ ಅವನ ತಲೆಯ ಮೇಲೆ ಬರಬಾರದು; ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿಕೊಂಡ ದಿವಸ ಗಳು ಪೂರ್ತಿಯಾಗುವ ವರೆಗೆ ಅವನು ಪರಿಶುದ್ಧನಾಗಿ ರುವನು; ಅವನು ತನ್ನ ತಲೆಯ ಕೂದಲನ್ನು ಬೆಳೆಸ ಬೇಕು.

ಅರಣ್ಯಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी