ಇಬ್ರಿಯರಿಗೆ 12:25

ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 12

23ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ

24ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.

25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

26ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.

27ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು.

ಇಬ್ರಿಯರಿಗೆ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी