ಯಾಜಕಕಾಂಡ 7:36

ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 7

34ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.

35ಆರೋನನ ಅಭಿಷೇಕವೂ ಅವನ ಮಕ್ಕಳ ಅಭಿಷೇಕವೂ ಆಗುವ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಕರ್ತನಿಗೆ ಒಪ್ಪಿಸಿ ಕೊಳ್ಳುವಾಗ ಕರ್ತನಿಗೆ ಬೆಂಕಿಯಿಂದ ಮಾಡಲ್ಪಡುವ ಸಮರ್ಪಣೆಗಳಲ್ಲಿ ಇರುವ ಪಾಲು ಇದೇ.

36ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.

37ದಹನಬಲಿ ಆಹಾರದಬಲಿ ಪಾಪದಬಲಿ ಅತಿಕ್ರಮದಬಲಿ ಪ್ರತಿಷ್ಠೆಗಳ ಮತ್ತು ಸಮಾಧಾನದ ಯಜ್ಞಾರ್ಪಣೆಗಳು ಇವೇ.

38ಸೀನಾಯಿ ಅರಣ್ಯದಲ್ಲಿ ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಇವುಗಳನ್ನು ಕರ್ತನು ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಆಜ್ಞಾಪಿಸಿದನು.

ಯಾಜಕಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी