ಮತ್ತಾಯನು 5:27

ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;

ಸಂದರ್ಭದೊಂದಿಗೆ ಓದಿ · ಮತ್ತಾಯನು 5

25ನಿನ್ನ ವಿರೋಧಿಯ ಸಂಗಡ ನೀನು ದಾರಿಯ ಲ್ಲಿರುವಾಗಲೇ ತ್ವರೆಯಾಗಿ ಅವನ ಕೂಡ ಒಂದಾಗು; ಇಲ್ಲವಾದರೆ ಯಾವ ಸಮಯದಲ್ಲಿಯಾದರೂ ಆ ವಿರೋಧಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು ಮತ್ತು ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಾನು; ಆಗ ನೀನು ಸೆರೆಯಲ್ಲಿ ಹಾಕಲ್ಪಡುವಿ.

26ನಾನು ನಿನಗೆ ನಿಜವಾಗಿ ಹೇಳುವದೇನಂದರೆ--ನೀನು ಕೊನೆಯ ಕಾಸನ್ನು ಸಲ್ಲಿಸುವ ತನಕ ಯಾವ ವಿಧದಿಂದಲೂ ಅಲ್ಲಿಂದ ಹೊರಗೆ ಬರುವದೇ ಇಲ್ಲ.

27ವ್ಯಭಿಚಾರ ಮಾಡಬಾರದು ಎಂದು ಪೂರ್ವಿಕರು ಹೇಳಿರುವದನ್ನು ನೀವು ಕೇಳಿದ್ದೀರಿ;

28ಆದರೆ ನಾನು ನಿಮಗೆ ಹೇಳುವದೇನಂದರೆ--ಒಬ್ಬ ಸ್ತ್ರೀಯನ್ನು ಮೋಹಿಸುವದಕ್ಕೆ ನೋಡುವ ಪ್ರತಿಯೊಬ್ಬನು ಆಗಲೇ ತನ್ನ ಹೃದಯದಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದ್ದಾನೆ.

29ಆದದರಿಂದ ನಿನ್ನ ಬಲಗಣ್ಣು ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಿತ್ತು ನಿನ್ನಿಂದ ಬಿಸಾಡಿಬಿಡು; ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ.

ಮತ್ತಾಯನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी