ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
20ಹೀಗೆ ಪರಿಶುದ್ಧ ಸ್ಥಳದಲ್ಲಿಯೂ ಸಭೆಯ ಗುಡಾರದಲ್ಲಿಯೂ ಯಜ್ಞವೇದಿಗೂ ಪ್ರಾಯಶ್ಚಿತ್ತವನ್ನು ಮಾಡಿ ಮುಗಿಸಿದ ಮೇಲೆ ಅವನು ಒಂದು ಜೀವವುಳ್ಳ ಆಡನ್ನು ತರಬೇಕು.
21ಆರೋನನು ಆ ಜೀವವುಳ್ಳ ಆಡಿನ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು ಇಸ್ರಾಯೇಲ್ ಮಕ್ಕಳ ಎಲ್ಲಾ ಅಕ್ರಮಗಳನ್ನೂ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆ ಮಾಡಿ ಅವುಗಳನ್ನು ಆಡಿನ ತಲೆಯ ಮೇಲೆ ಇರಿಸಿ ಯೋಗ್ಯನಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.
22ಆ ಆಡು ಅವರ ಎಲ್ಲಾ ಅಕ್ರಮಗಳನ್ನು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಆಡನ್ನು ಅಡವಿಗೆ ಬಿಟ್ಟುಬಿಡಬೇಕು.
23ಆರೋನನು ಸಭೆಯ ಗುಡಾರದೊಳಗೆ ಬಂದು ತಾನು ಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟು ಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗ ಳನ್ನು ಅಲ್ಲಿಯೇ ಬಿಡಬೇಕು.
24ಅವನು ಪರಿಶುದ್ಧ ಸ್ಥಳದಲ್ಲಿ ತನ್ನ ಶರೀರವನ್ನು ನೀರಿನಿಂದ ತೊಳೆದು ತನ್ನ ಬಟ್ಟೆಗಳನ್ನು ಧರಿಸಿಕೊಂಡು ಹೊರಗೆ ಬಂದು ತನ್ನ ದಹನಬಲಿಯನ್ನೂ ಜನರ ದಹನಬಲಿಯನ್ನೂ ಸಮ ರ್ಪಿಸಿ ತನಗೋಸ್ಕರವೂ ಜನರಿಗೋಸ್ಕರವೂ ಪ್ರಾಯ ಶ್ಚಿತ್ತಮಾಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ