ಜೆಕರ್ಯ 4:4

ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು.

ಸಂದರ್ಭದೊಂದಿಗೆ ಓದಿ · ಜೆಕರ್ಯ 4

2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.

3ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳುಂಟು, ಅದರ ಬಳಿಯಲ್ಲಿ ಎರಡು ಇಪ್ಪೇಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ ಪಾತ್ರೆಯ ಎಡಗಡೆಯಲ್ಲಿ ಒಂದೂ ಉಂಟು ಅಂದೆನು.

4ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು.

5ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.

6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಜೆಕರ್ಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी